Skip to main content

ಡಾ.ಬಿ.ಆರ್.ಅಂಬೇಡ್ಕರ್ ರವರ ಬರಹಗಳು

"ಹಿಂದೂಗಳ ಮೇಲೆ ಜಾತಿ ಬೀರಿರುವ ಪರಿಣಾಮವು ನಿಜಕ್ಕೂ ಶೋಚನೀಯವಾದುದು. ಹೇಗೆಂದರೆ ಜಾತಿಯು ಜನಸಾಮಾನ್ಯರ ಸಾರ್ವಜನಿಕ ಅಂತಃಕರಣವನ್ನು ಕೊಂದಿದೆ‌. ಜಾತಿಯು ಸಾರ್ವಜನಿಕರಲ್ಲಿ ಇರಬಹುದಾದ ಔದಾರ್ಯ ಗುಣವನ್ನು ನಾಶಪಡಿಸಿದೆ. ಜಾತಿಯು ಜನಸಾಮಾನ್ಯರಲ್ಲಿ ಸಾರ್ವಜನಿಕ ಅಭಿಪ್ರಾಯ ರೂಪಿಸಿಕೊಳ್ಳುವಿಕೆಯನ್ನು ಅಸಾಧ್ಯಗೊಳಿಸಿದೆ. ಈ ನಿಟ್ಟಿನಲ್ಲಿ ಹಿಂದೂವೊಬ್ಬನ ಸಾರ್ವಜನಿಕತೆ ಎಂದರೆ ಅದು ಆತನ ಜಾತಿಯಾಗಿದೆ. ಆತನ ಜವಾಬ್ದಾರಿ ಕೂಡ ಆತನ ಜಾತಿಯ ಬಗೆಗಷ್ಟೇ ಆಗಿರುತ್ತದೆ. ಆತನ ವಿಧೇಯತೆ ಕೂಡ ಆತನ ಜಾತಿಗಷ್ಟೆ ಸೀಮಿತವಾಗಿರುತ್ತದೆ. ಈ ಹಿನ್ನೆಲೆಯಲ್ಲಿ (ಆ ವ್ಯವಸ್ಥೆಯಲ್ಲಿ) ಯಾರು ಪಾತ್ರರೋ ಅಂತಹವರಿಗೆ ಅನುಕಂಪ ಸಿಗುವುದಿಲ್ಲ. ಅರ್ಹತೆ ಇರುವವರಿಗೆ ಪ್ರಶಂಸೆ ಸಿಗುವುದಿಲ್ಲ. ಅಗತ್ಯ ಇರುವವರಿಗೆ ದಾನ ಸಿಗುವುದಿಲ್ಲ. ನೋವಿನಲ್ಲಿರುವವರ ಕೂಗಿಗೆ ಸ್ಪಂದನೆ ಸಿಗುವುದಿಲ್ಲ."

-ಡಾ.ಬಿ.ಆರ್.ಅಂಬೇಡ್ಕರ್


(Vol.1. Pp 56) 

ಸಂಗ್ರಹ ಮತ್ತು ಅನುವಾದ: ರಘೋತ್ತಮ ಹೊ.ಬ

Comments

Popular posts from this blog

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಮುಚ್ಚಿಡಲ್ಪಟ್ಟ ಅಂಬೇಡ್ಕರ್ ರ ಭವ್ಯ ಇತಿಹಾಸ -ರಘೋತ್ತಮ ಹೊ.ಬ

  ಬಾಬಾಸಾಹೇಬ್ ಡಾ||ಅಂಬೇಡ್ಕರ್ ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲಿ ಹುಟ್ಟಿದರು ಬಾಲ್ಯದಿಂದಲೆ ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರು. ತಮ್ಮ ತಂದೆಯನ್ನು ನೋಡಲು ಗಾಡಿಯಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು. ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ' ಎನಿಸಿಕೊಂಡರು. ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ ದೇಶದ ಜನತೆಗೆ ಗೊತ್ತಿರುವುದು ಸಾಧ್ಯವಿಲ್ಲ. ಅಥವಾ ಮೇಲೆ ಹೇಳಿರುವುದೇ ಹೆಚ್ಚಿರಬೇಕು! ದಲಿತರಿಗೆ ಮೀಸಲಾತಿ ತಂದುಕೊಟ್ಟದಷ್ಟೆ ಅವರ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ತನ್ಮೂಲಕ ಅಂಬೇಡ್ಕರ್ ಎಂಬ"ಮಹಾನ್ ಇತಿಹಾಸವನ್ನು" ಮುಚ್ಚಲಾಗುತ್ತಿದೆ!       ಹಾಗಿದ್ದರೆ ಅಂಬೇಡ್ಕರ್ ರವರ ಸಾಧನೆ ಇದಿಷ್ಟು ಮಾತ್ರವಾ? ಅಥವಾ ಇನ್ನೇನು ಇಲ್ಲವಾ? ಯಾಕೆಂದರೆ 2006ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಅಧ್ಯಕ್ಷ   ಜಾರ್ಜ್ ಬುಷ್ "ಗಾಂಧಿ, ಠಾಗೋರ್ ಮತ್ತು ನೆಹರೂ"ರವರುಗಳನ್ನು ನವಭಾರತದ ನಿರ್ಮಾತೃಗಳೆನ್ನುತ್ತಾರೆ. ಅಂಬೇಡ್ಕರ್ ರವರನ್ನು ಈ ಪರಿಯಲ್ಲಿ ಇತಿಹಾಸದಲ್ಲಿ ಕುಬ್ಜರನ್ನಾಗಿಸುವ ಅಥವಾ ಮರೆಮಾಚುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವಾಗ ಬುಷ್‍ ರಂತಹವರು ಇದಕ್ಕಿಂತ ಹೆಚ್ಚ...