"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...
Comments
Post a Comment